ವಚನ ದಾಸೋಹ

ವಚನ:
ಅಷ್ಟವಿಧಾರ್ಚನೆಯ ಮಾಡಿ ಒಲಿಸುವೆನೆ ಅಯ್ಯಾ,
ನೀನು ಬಹಿರಂಗವ್ಯವಹಾರದೂರಸ್ಥನು.
ಅಂತರಂಗದಲ್ಲಿ ಧ್ಯಾನವ ಮಾಡಿ ಒಲಿಸುವೆನೆ ಅಯ್ಯಾ, 
ನೀನು ವಾಙ್ಮನಕ್ಕತೀತನು.
ಜಪಸ್ತೋತ್ರದಿಂದ ಒಲಿಸುವೆನೆ ಅಯ್ಯಾ,
ನೀನು ನಾದಾತೀತನು.
ಭಾವಜ್ಞಾನದಿಂದ ಒಲಿಸುವೆನೆ ಅಯ್ಯಾ,
ನೀನು ಮತಿಗತೀತನು.
ಹೃದಯ ಕಮಲಮಧ್ಯದಲ್ಲಿ ಇಂಬಿಟ್ಟುಕೊಂಬೆನೆ ಅಯ್ಯಾ,
ನೀನು ಸರ್ವಾಂಗ ಪರಿಪೂರ್ಣನು.
ಒಲಿಸಲೆನ್ನಳವಲ್ಲ ನೀನೊಲಿವುದೆ ಸುಖವಯ್ಯಾ ಚೆನ್ನಮಲ್ಲಿಕಾರ್ಜುನಯ್ಯಾ.
- ವೀರ ವಿರಾಗಿಣಿ ಅಕ್ಕ ಮಹಾದೇವಿ
Picture post created by me. Hope you all will like it. A small service to popularise Vachana Sahitya.

Comments

Popular posts from this blog

Shika chakra or Bindu chakra:Bindu visarga

Hrit Chakra or Eight Petals Chakra

A-Ka-Ta triangle or Akshara Brahma