Posts

Showing posts with the label ವಚನ ದಾಸೋಹ - ಗುದಸ್ಥಾನದಲ್ಲಿ ಆಧಾರಚಕ್ರ

ವಚನ ದಾಸೋಹ - ಗುದಸ್ಥಾನದಲ್ಲಿ ಆಧಾರಚಕ್ರ

Image
*ವಚನ*: #ಗುದಸ್ಥಾನದಲ್ಲಿ ಆಧಾರಚಕ್ರ, ಅಲ್ಲಿಗೆ ಪೃಥ್ವಿಯೆಂಬ ಮಹಾಭೂತ, ಸದ್ಯೋಜಾತವಕ್ತ್ರ, ಬ್ರಹ್ಮ ಪೂಜಾರಿ, ಸುವರ್ಣದ ತೇಜ, ಬಾಲರವಿಕೋಟಿ ಪ್ರಕಾಶ, ನಾಲ್ಕೆಸಳಿನ ತಾವರೆಯ ಮಧ್ಯದಲ್ಲಿ ಸುವರ್ಣಮಯಲಿಂಗ - ಅದು ಆಚಾರಲಿಂಗ, ಅದಕ್ಕೆ ಬೀಜಾಕ್ಷಾರ ಓಂ ನಾಂ ನಾಂ ನಾಂ ಎಂಬ ನಾದಘೋಷ. ಎಸಳು ನಾಲ್ಕರಲ್ಲಿ ವ, ಶ, ಷ, ಸ ಎಂಬ ನಾಲ್ಕಕ್ಷರ. ಅದು ದೇವರಿಗೂ ತಮಗೂ ಪಶ್ಚಿಮಮುಖ- ಸದ್ಯೋಜಾತ ವಕ್ತ್ರ, ಆಧಾರಚಕ್ರ. ಲಿಂಗಸ್ಥಾನದಲ್ಲಿ ಸ್ವಾದಿಷ್ಠಾನಚಕ್ರ, ಅಲ್ಲಿಗೆ ಅಪ್ಪುವೆಂಬ ಮಹಾಭೂತ, ವಾಮದೇವವಕ್ತ್ರ, ವಿಷ್ಣು ಪೂಜಾರಿ, ನೀಲದ ತೇಜ, ಬಾಲದ್ವಿಕೋಟಿ ಸೂರ್ಯಪ್ರಕಾಶ, ಅರೆಸಳಿನ ತಾವರೆಯ ಮಧ್ಯದಲ್ಲಿ ಗೋಕ್ಷೀರದ ಹಾಗೆ ಧವಳ ವರ್ಣದ ಲಿಂಗ - ಅದು ಗುರುಲಿಂಗ; ಅದಕ್ಕೆ ಬೀಜಾಕ್ಷರ ಓಂ ಮಾಂ ಮಾಂ ಮಾಂ ಎಂಬ ನಾದಘೋಷ. ಎಸಳು ಆರರಲ್ಲಿ ಬ ಭ ಮ ಯ ರ ಲ ಎಂಬ ಷಡಕ್ಷರ ಅದು ದೇವರಿಗೂ ತಮಗೂ ಉತ್ತರಮುಖ-ವಾಮದೇವವಕ್ತ್ರ, ಸ್ವಾದಿಷ್ಠಾನಚಕ್ರ. ನಾಬಿಸ್ಥಾನದಲ್ಲಿ ಮಣಿಪೂರಕಚಕ್ರ, ಅಲ್ಲಿಗೆ ಅಗ್ನಿಯೆಂಬ ಮಹಾಭೂತ, ಅಘೋರವಕ್ತ್ರ ರುದ್ರ ಪೂಜಾರಿ, ಮಾಣಿಕ್ಯತೇಜ, ಬಾಲತ್ರಿಕೋಟಿಸೂರ್ಯಪ್ರಕಾಶ, ಹತ್ತೆಸಳಿನ ತಾವರೆಯ ಮಧ್ಯದಲ್ಲಿ ಮಾಣಿಕ್ಯವರ್ಣದ ಲಿಂಗ-ಅದು ಶಿವಲಿಂಗ, ಅದಕ್ಕೆ ಬೀಜಾಕ್ಷರ ಓಂ ಶಿಂ ಶಿಂ ಶಿಂ ಎಂಬ ನಾದಘೋಷ. ಎಸಳು ಹತ್ತರಲ್ಲಿ ಡ, ಢ, ಣ, ತ, ಥ, ದ, ಧ, ನ, ಪ, ಫ ಎಂಬ ದಶಾಕ್ಷರ. ಅದು ದೇವರಿಗೂ ತಮಗೂ ದಕ್ಷಿಣಮುಖ - ಅಘೋರವಕ್ತ್ರ, ಮಣಿಪೂರಕಚಕ್ರ. ಹೃದಯ ಸ್ಥಾನದಲ್...