Posts

Showing posts with the label ಷಟ್ಸ್ಥಲ

ಷಟ್ಸ್ಥಲ

Image
ಷಟ್ಸ್ಥಲ *ಷಟ್ಸ್ಥಲ* : ಲಿಂಗಾಯತ ಧರ್ಮದ ಮೂಲಭೂತ  ತಳಹದಿಗಳೆಂದರೆ ಅಷ್ಟಾವರಣ, ಪಂಚಾಚಾರ ಮತ್ತು ಷಟ್ಸ್ಥಲ. ಶಿವಯೋಗ ಎಂಬುದು ಸಾಧಕ ಶಿವನೇ ಆಗಿ ವಿಕಾಸಗೊಳ್ಳುವ ಪ್ರಕ್ರಿಯೆ. ಈ ಪ್ರಕ್ರಿಯೆಯಲ್ಲಿ ಅನುಸರಿಸುವ  ಪಥವೇ  ಷಟ್ಸ್ಥಲ. ಷಟ್ಸ್ಥಲ ವೆಂದರೆ ಸಾಧಕ ಅಜ್ಞಾನ ಸ್ಥಿತಿಯಿಂದ ಪರಮ ಸುಜ್ಞಾನ ಸ್ಥಿತಿಯೆಡೆಗೆ ತಲುಪಲು ಅನುಸರಿಸಬೇಕಾದ ದಿವ್ಯಪಥ. ಸ್ಥಲ ಎನ್ನುವ ಪದಕ್ಕೆ ಸ್ಥಾನ, ಮೆಟ್ಟಿಲು ಎಂಬ ಅರ್ಥವಿದೆ. ಸ್ಥಲವೆಂದರೆ ಈ ಪಥದಲ್ಲಿ ನಿರ್ಮಿತವಾದ ವಿವಿಧ ಹಂತಗಳು ಅಥವಾ ಮೆಟ್ಟಿಲುಗಳು. ಈ ಹಂತಗಳು ಆರು, ಒಟ್ಟಾರೆ ಇವನ್ನು ಷಟ್ಸ್ಥಲಗಳೆಂದು ಸೂಚಿಸುವುದು ರೂಢಿ. ಭಕ್ತ, ಮಾಹೇಶ್ವರ, ಪ್ರಸಾದಿ, ಪ್ರಾಣಲಿಂಗಿ, ಶರಣ ಮತ್ತು ಐಕ್ಯಗಳೇ ಇವು.  #ಸರ್ವಶೂನ್ಯ ಆದಿ ಅನಾದಿ ಭಕ್ತಸ್ಥಲ. ನಾದ ಬಿಂದು ಮಹೇಶ್ವರಸ್ಥಲ. ಕಳೆ ಬೆಳಗು ಪ್ರಸಾದಿಸ್ಥಲ. ಅರಿವು ನಿರವಯವು ಪ್ರಾಣಲಿಂಗಿಸ್ಥಲ. ಜ್ಞಾನ ಸುಜ್ಞಾನ ಶರಣಸ್ಥಲ. ಭಾವವಿಲ್ಲದ ಬಯಲು ಬಯಲಿಲ್ಲದ ಭಾವ ಆಗಮ್ಯದ ಐಕ್ಯಸ್ಥಲ- ಇಂತೀ ಷಡುಸ್ಥಲದ ಕೊರಡ ಮೆಟ್ಟಿ ನಿಂದಂಗೆ ಹೆಸರಿಲ್ಲ ಕುರುಹಿಲ್ಲ ತನಗೆ ತಾನಿಲ್ಲ ಗುಹೇಶ್ವರಾ. / 1507 ಇವುಗಳನ್ನು ಪುನಃ ಒಳವಿಂಗಡಣೆ ಮಾಡಿ ನೂರೊಂದುಸ್ಥಲ ಅಥವಾ ಏಕೋತ್ತರಶತಸ್ಥಲಗಳೆಂದೂ ಕರೆಯಲಾಗುತ್ತದೆ. ಹರಿಹರನು ತನ್ನ ದೀರ್ಘ ರಗಳೆಗಳ ವಿಭಾಗಗಳನ್ನು ಸ್ಥಲ ಎಂದೇ ಕರೆಯುತ್ತಾನೆ. ಪ್ರಾಯಶಃ ತನ್ನ ರಗಳೆಗಳ ನಾಯಕರು ಸಾಧಕರು, ಅವರ ಸಾಧನೆಯ ...